ಬೆಂಗಳೂರು: ನಗರದಲ್ಲಿನ ಹಲಸೂರು ಠಾಣಾ ವ್ಯಾಪ್ತಿಯಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ ಬಂದಿರುವ ಘಟನೆ ವರದಿಯಾಗಿದೆ.
ರಾಯಭಾರಿ ಕಚೇರಿಯ ಅಧಿಕಾರಿಗಳು ಇ-ಮೇಲ್ ಪರಿಶೀಲನೆ ನಡೆಸುವ ವೇಳೆ ಬಾಂಬ್ ಬೆದರಿಕೆ ಮೇಲ್ ಬಂದಿರುವುದು ಗಮನಕ್ಕೆ ಬಂದಿದೆ. ಮೇಲ್‌ನಲ್ಲಿ ಕಚೇರಿ ಹಾಗೂ ಆವರಣದಲ್ಲಿ ಆರ್‌ಡಿಎಕ್ಸ್ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ಸ್ಫೋಟವಾಗಲಿದೆ ಎಂದು ಉಲ್ಲೇಖಿಸಲಾಗಿತ್ತು. ತಕ್ಷಣವೇ ರಾಯಭಾರಿ ಕಚೇರಿ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಂಬ್ ಸ್ಕ್ವಾಡ್ ಹಾಗೂ ಶ್ವಾನ ದಳದ ಸಹಾಯದಿಂದ ಸುದೀರ್ಘ ಪರಿಶೀಲನೆ ನಡೆಸಿದರು. ಆದರೆ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆದರಿಕೆ ಮೇಲ್ ಕಳುಹಿಸಿದವರ ಪತ್ತೆಗೆ ತನಿಖೆ ಮುಂದುವರಿದಿದೆ.



