ಬೆಳಗಾವಿ: ಬೆಳಗಾವಿ ಜಿಲ್ಲೆಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವ ಕೈದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜೈಲಿನೊಳಗೆ ನಡೆದ ಎಸ್‌ಟಿಡಿ ಫೋನ್ ಕಾಲ್ ವಿಚಾರವೇ ಈ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿ ಬಂಧನದಲ್ಲಿರುವ ಮಂಗಳೂರು ಮೂಲದ ಫಯಾನ್ ಎಂಬಾತ, ಬೆಳಗಾವಿ ಮೂಲದ ಮತ್ತೊಬ್ಬ ಅತ್ಯಾಚಾರ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಜಜ್ಜಿ ಹಲ್ಲೆ ನಡೆಸಿದ್ದಾನೆ. ಈ ಹಲ್ಲೆಯಿಂದ ಸುರೇಶ್ ತೀವ್ರವಾಗಿ ಗಾಯಗೊಂಡಿದ್ದಾನೆ.
ಘಟನೆಯ ಬಳಿಕ ಜೈಲು ಅಧಿಕಾರಿಗಳು ತಕ್ಷಣ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗಾಯಗೊಂಡ ಸುರೇಶ್ ಅವರನ್ನು ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಜೈಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಭದ್ರತಾ ವ್ಯವಸ್ಥೆ ಇನ್ನಷ್ಟು ಬಿಗಿಗೊಳಿಸಲಾಗಿದೆ.



