ಬೆಂಗಳೂರು: ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಸರ್ಫರಾಜ್ ಖಾನ್ ವಿರುದ್ಧ ನಡೆದ ಲೋಕಾಯುಕ್ತ ದಾಳಿ ಭಾರೀ ಸಂಚಲನ ಮೂಡಿಸಿದೆ. ದಾಳಿಯಲ್ಲಿ ಒಟ್ಟು 14.38 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿರುವುದು ಇದೀಗ ಅಧಿಕೃತವಾಗಿ ಬಹಿರಂಗವಾಗಿದೆ.
ಲೋಕಾಯುಕ್ತ ಅಧಿಕಾರಿಗಳ ಮಾಹಿತಿ ಪ್ರಕಾರ, ದಾಳಿಯಲ್ಲಿ 4 ಮನೆಗಳು, 37 ಎಕರೆ ವ್ಯವಸಾಯ ಭೂಮಿ ದಾಖಲೆಗಳು (ಸುಮಾರು 8 ಕೋಟಿ ರೂ. ಮೌಲ್ಯ), 2.99 ಕೋಟಿ ರೂ. ಚಿನ್ನಾಭರಣ, ಐಷಾರಾಮಿ ಕಾರುಗಳು, 66,500 ರೂ. ನಗದು, 1 ಕೋಟಿ 29 ಸಾವಿರ ರೂ. ಬ್ಯಾಂಕ್ ಠೇವಣಿ ಪತ್ತೆಯಾಗಿವೆ.
ಡಿಸೆಂಬರ್ 12ರಂದು ಸರ್ಫರಾಜ್ ಖಾನ್‌ಗೆ ಸಂಬಂಧಿಸಿದಂತೆ ಒಟ್ಟು 13 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.
ಇದಕ್ಕೂ ಮುನ್ನ ಮಡಿಕೇರಿ ತಾಲೂಕಿನ ಗಾಳಿಬೀಡು ಗ್ರಾಪಂ ವ್ಯಾಪ್ತಿಯ ವಣಚಲಿನಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ ಮಾಡಿರುವ ಆರೋಪಗಳು ಕೇಳಿಬಂದಿದ್ದು, ಸರ್ಫರಾಜ್ ಖಾನ್ ವಿರುದ್ಧದ ಸಂಶಯವನ್ನು ಮತ್ತಷ್ಟು ಗಟ್ಟಿಮಾಡಿದೆ.



