ಪುತ್ತೂರು: ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾತ್ಮಕ ಭಾಷಣ ನೀಡಿದ್ದ ಆರೋಪದ ಮೂಲಕ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಿವಾಸಿ ಮತ್ತು ಕಾಂಗ್ರೆಸ್ ಮುಖಂಡ ಅಮಳ ರಾಮಚಂದ್ರ ದೂರು ನೀಡಿದ್ದು, ಮಾನವ ಬಂಧುತ್ವ ವೇದಿಕೆಯ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದೆ. ಭಾಷಣವನ್ನು ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ ಚಾನಲ್ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.
ಜನವರಿ 12 ರಂದು ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಎದುರಿನಲ್ಲಿ ವಿವಾದಾತ್ಮಕ ಭಾಷಣ ನಡೆದಿದೆ ಎಂಬ ಆರೋಪ ಇದೆ. ದಾಖಲಾಗಿರುವ ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆ (IPC) ಅಡಿ ಗಂಭೀರ ಸೆಕ್ಷನ್‌ಗಳು 196, 299, 302, 353(2), 3(5) ಒಳಗೊಂಡಿವೆ.



