ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಹೋಬಳಿ ಮಟ್ಟದ ಹಿಂದೂ ಸಮ್ಮೇಳನವು ಸಡಗರ ಸಂಭ್ರಮದಿಂದ ಜರುಗಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿಯ ಬೃಹತ್ ಭಾವಚಿತ್ರ ಮೆರವಣಿಗೆಯ ಮೂಲಕ ಶೋಭಾಯಾತ್ರೆ ಹಾಗೂ ಸಂಜೆ 5 ಗಂಟೆಗೆ ಶ್ರೀ ಭೀಮರಡ್ಡಿ ಸರ್ಕಲ್ನಲ್ಲಿ ಬೃಹತ್ ಸಮಾವೇಶ ನಡೆಯಿತು.
ಸಮಾವೇಶದ ಸಾನ್ನಿಧ್ಯ ವಹಿಸಿದ್ದ ಬನ್ನಿಕೊಪ್ಪದ ಸುಜ್ಞಾನದೇವ ಸ್ವಾಮೀಜಿ, ಬೆಳ್ಳಟ್ಟಿಯ ಬಸವರಾಜ ಸ್ವಾಮೀಜಿ ಆಶೀರ್ವಚನ ನೀಡಿದರು. ಅಧ್ಯಕ್ಷತೆಯನ್ನು ರಾಜೇಂದ್ರಕುಮಾರ ಹಲಗಲಿ ವಹಿಸಿ ಮಾತನಾಡಿದರು. ದಿಕ್ಸೂಚಿ ಭಾಷಣವನ್ನು ನಾಗಪುರದ ಅಖಿಲ ಭಾರತೀಯ ಸಂಘಟನಾ ಮಂತ್ರಿ ಭಾರತೀಯ ಶಿಕ್ಷಣ ಮಂಡಲದ ಶಂಕರಾನಂದಜಿ ನೀಡಿದರು.



