ಬೆಂಗಳೂರು: ಪಿಯುಸಿ ಓದುತ್ತಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರ್ ಟಿ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಒಬ್ಬರನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಕಾನ್ಸ್‌ಟೇಬಲ್ ಫ್ರೀಡಂ ಪಾರ್ಕ್‌ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ವೇಳೆ, ಪ್ರಥಮ ಪಿಯುಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ವಿದ್ಯಾರ್ಥಿಯ ಪೋಷಕರು ದೂರು ನೀಡಿದ್ದು, ಪ್ರಕರಣ ಬೆಳಕಿಗೆ ಬಂದಿದೆ.
ದೂರು ಆಧಾರದ ಮೇಲೆ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಆರೋಪಿತ ಕಾನ್ಸ್‌ಟೇಬಲ್ ನನ್ನು ಪೊಲೀಸರು ಬಂಧಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ಈ ಘಟನೆ ಪೊಲೀಸ್ ಇಲಾಖೆಯ ವಲಯದಲ್ಲೇ ತೀವ್ರ ಚರ್ಚೆಗೆ ಕಾರಣವಾಗಿದೆ.



