ಇಸ್ಲಾಮಾಬಾದ್: ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಟಿ20 ಸರಣಿಗೆ ಪಾಕಿಸ್ತಾನ್ ಟಿ20 ತಂಡವನ್ನು ಪ್ರಕಟಿಸಲಾಗಿದೆ. 16 ಸದಸ್ಯರ ಈ ತಂಡವನ್ನು ಸಲ್ಮಾನ್ ಅಲಿ ಅಘಾ ಮುನ್ನಡೆಸಲಿದ್ದು, ಟಿ20 ವಿಶ್ವಕಪ್‌ನಲ್ಲಿಯೂ ಅವರು ಪಾಕ್ ತಂಡದ ನಾಯಕನಾಗಿ ಮುಂದುವರೆಯುವುದು ಖಚಿತವಾಗಿದೆ.
ಈ ತಂಡದಲ್ಲಿ ಹಿರಿಯ ಆಟಗಾರರಾದ ಬಾಬರ್ ಆಝಂ ಹಾಗೂ ಶಾಹೀನ್ ಶಾ ಅಫ್ರಿದಿಗೆ ಮರು ಅವಕಾಶ ನೀಡಲಾಗಿದೆ. ಕಳಪೆ ಫಾರ್ಮ್ ಹಿನ್ನೆಲೆ ಇಬ್ಬರನ್ನೂ ತಂಡದಿಂದ ಹೊರಗಿಡಲಾಗಿತ್ತು. ಆದರೆ ಆಸ್ಟ್ರೇಲಿಯಾ ವಿರುದ್ಧದ ಮಹತ್ವದ ಸರಣಿಗೆ ಪಾಕ್ ಕ್ರಿಕೆಟ್ ಮಂಡಳಿ ಅನುಭವಿ ಆಟಗಾರರ ಮೇಲೆ ಮತ್ತೆ ನಂಬಿಕೆ ಇಟ್ಟಿದೆ.
ಇನ್ನೊಂದೆಡೆ, ಅನುಭವಿ ವಿಕೆಟ್ ಕೀಪರ್ ಮೊಹಮ್ಮದ್ ರಿಝ್ವಾನ್ ಅವರನ್ನು ಈ ಸರಣಿಗೆ ಆಯ್ಕೆ ಮಾಡಿಲ್ಲ. ಜೊತೆಗೆ ವೇಗಿ ಹ್ಯಾರಿಸ್ ರೌಫ್ ಅವರಿಗೂ ಟಿ20 ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಈ ಆಯ್ಕೆ ಕುರಿತಾಗಿ ಪಾಕ್ ಕ್ರಿಕೆಟ್ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ಪಾಕಿಸ್ತಾನ್ ಟಿ20 ತಂಡ
ಸಲ್ಮಾನ್ ಅಲಿ ಅಘಾ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಝಮಾನ್, ಖ್ವಾಜಾ ಮೊಹಮ್ಮದ್ ನಫಯ್ (ವಿಕೆಟ್ ಕೀಪರ್), ಮೊಹಮ್ಮದ್ ನವಾಝ್, ಮೊಹಮ್ಮದ್ ಸಲ್ಮಾನ್ ಮಿರ್ಝ, ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಸಾಹಿಬ್ಝಾದ ಫರ್ಹಾನ್ (ವಿಕೆಟ್ ಕೀಪರ್), ಶಾಹೀನ್ ಶಾ ಅಫ್ರಿದಿ, ಸೈಮ್ ಅಯ್ಯೂಬ್, ಶಾದಾಬ್ ಖಾನ್, ಉಸ್ಮಾನ್ ಖಾನ್ (ವಿಕೆಟ್ ಕೀಪರ್), ಉಸ್ಮಾನ್ ತಾರಿಖ್.
ಆಸ್ಟ್ರೇಲಿಯಾ ಟಿ20 ತಂಡ
ಮಿಚೆಲ್ ಮಾರ್ಷ್ (ನಾಯಕ), ಶಾನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಮಹ್ಲಿ ಬಿಯರ್ಡ್ಮನ್, ಕೂಪರ್ ಕೊನೊಲಿ, ಬೆನ್ ದ್ವಾರ್ಶುಯಿಸ್, ಜ್ಯಾಕ್ ಎಡ್ವರ್ಡ್ಸ್, ಕ್ಯಾಮರೋನ್ ಗ್ರೀನ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಜೋಶ್ ಫಿಲಿಪಿ, ಮ್ಯಾಥ್ಯೂ ರೆನ್ಶಾ, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಂ ಝಂಪಾ.



