ಢಾಕಾ;- ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಸರಣಿ ಹತ್ಯೆ ಮುಂದುವರಿದಿದೆ.
ಬಾಂಗ್ಲಾದೇಶದ ನರಸಿಂಗ್ಡಿ ಜಿಲ್ಲೆಯಲ್ಲಿ 23 ವರ್ಷದ ಹಿಂದೂ ಯುವಕ ಚಂಚಲ್ ಚಂದ್ರ ಭೌಮಿಕ್ ಅವರನ್ನು ಗ್ಯಾರೇಜ್ ಒಳಗೆ ಪೆಟ್ರೋಲ್ ಸುರಿದು ಸಜೀವ ದಹನ ಮಾಡಿರುವ ಅಮಾನುಷ ಘಟನೆ ನಡೆದಿದೆ.
ಕೆಲಸದ ನಿಮಿತ್ತ ನರಸಿಂಗ್ಡಿಯಲ್ಲಿ ವಾಸವಿದ್ದ ಚಂಚಲ್, ಶುಕ್ರವಾರ ತಡರಾತ್ರಿ ಗ್ಯಾರೇಜ್‌ನಲ್ಲಿ ಮಲಗಿದ್ದ ವೇಳೆ ಕಿಡಿಗೇಡಿಗಳು ಹೊರಗಿನಿಂದ ಶಟರ್‌ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬೆಂಕಿ ವೇಗವಾಗಿ ವ್ಯಾಪಿಸಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದಾಳಿ ಪೂರ್ವನಿಯೋಜಿತ ಕೃತ್ಯ ಎಂದು ಕುಟುಂಬಸ್ಥರು ಆರೋಪಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬೆಂಕಿ ಹಚ್ಚಿದ ದೃಶ್ಯ ವೈರಲ್ ಆಗಿದೆ.
ಅಗ್ನಿಶಾಮಕ ದಳ ಒಂದು ಗಂಟೆಯ ಪರಿಶ್ರಮದ ಬಳಿಕ ಬೆಂಕಿ ನಂದಿಸಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.



