ಬೆಳಗಾವಿ:- ಬೆಳಗಾವಿಯಲ್ಲಿ ಅಪ್ರಾಪ್ತೆಗೆ ಬಿಯರ್ ಕುಡಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಪೋಕ್ಸೋ ವಿಶೇಷ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.
ಪ್ರಕರಣವನ್ನು ಕೇವಲ 8 ತಿಂಗಳಲ್ಲಿ ಇತ್ಯರ್ಥಗೊಳಿಸಿದ ನ್ಯಾಯಾಲಯ, ಸಾಕೀಬ್ ನಿಜಾಮಿ (22) ಹಾಗೂ ರವಿ ನಾಯ್ಯೋಡಿಗೆ ಜೀವಾವಧಿ ಜೈಲು ಶಿಕ್ಷೆ ಹಾಗೂ 8.76 ಲಕ್ಷ ರೂ. ದಂಡ ವಿಧಿಸಿದೆ. ಕೃತ್ಯಕ್ಕೆ ಸಹಕರಿಸಿದ ರೋಹನ್ ಪಾಟೀಲ್ ಮತ್ತು ಅಶುತೋಷ್ ಪಾಟೀಲ್‌ಗೆ ತಲಾ 20 ವರ್ಷ ಜೈಲು ಶಿಕ್ಷೆ ಮತ್ತು 6 ಲಕ್ಷ ರೂ. ದಂಡ ವಿಧಿಸಲಾಗಿದೆ.
ಜೊತೆಗೆ ಸಂತ್ರಸ್ತೆಗೆ 10 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ಸೂಚನೆ ನೀಡಲಾಗಿದೆ. 2025 ಮೇ 10ರಂದು ಸಾವಗಾಂವ್‌ನ ಫಾರ್ಮ್‌ಹೌಸ್‌ನಲ್ಲಿ ನಡೆದ ಈ ಕೃತ್ಯದ ಕುರಿತು ಸಂತ್ರಸ್ತೆಯ ಪೋಷಕರು ದೂರು ದಾಖಲಿಸಿದ್ದು, ಸರ್ಕಾರದ ಪರ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ್ ವಕಾಲತ್ತು ನಡೆಸಿದರು.



