ವಿಜಯಸಾಕ್ಷಿ ಸುದ್ದಿ, ಗದಗ: ಹುತಾತ್ಮ ದಿನಾಚರಣೆ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಭಾವಚಿತ್ರಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ, ಅಪರ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್, ಶರಣು ಗೋಗೇರಿ ಸೇರಿದಂತೆ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.



