ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ಸಂತಾಪ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಮಾನ ಲ್ಯಾಂಡಿಂಗ್ ವೇಳೆ ಸಂಭವಿಸಿದ ದುರ್ಘಟನೆಯಲ್ಲಿ ಅಜಿತ್ ಪವಾರ್ ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿ ಎಂದು ಹೇಳಿದ್ದಾರೆ.
ಅಜಿತ್ ಪವಾರ್ ಅವರು ಅತ್ಯಂತ ಕ್ರಿಯಾಶೀಲ ವ್ಯಕ್ತಿಯಾಗಿದ್ದು, ರೈತರ ಬದುಕಿನಲ್ಲಿ ಬದಲಾವಣೆ ತರಲು ಸದಾ ಶ್ರಮಿಸುತ್ತಿದ್ದರು ಎಂದು ಪಾಟೀಲ್ ಸ್ಮರಿಸಿದರು. ಕಳೆದ 10 ವರ್ಷಗಳ ಅವಧಿಯಲ್ಲಿ ಅಜಿತ್ ಪವಾರ್ ಅವರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ತಾವು ಎಐಸಿಸಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಮಯದಲ್ಲಿ ಅಜಿತ್ ಪವಾರ್ ಅವರ ಕಾರ್ಯಶೈಲಿಯನ್ನು ನೇರವಾಗಿ ಗಮನಿಸಿದ್ದೇನೆ ಎಂದು ಹೆಚ್.ಕೆ. ಪಾಟೀಲ್ ಹೇಳಿದರು.
ಶರದ್ ಪವಾರ್ ಅವರ ಸಹೋದರನ ಮಗನಾದ ಅಜಿತ್, ಮಹಾರಾಷ್ಟ್ರ ರಾಜಕೀಯದಲ್ಲಿ ಅಪ್ರತಿಮ ವ್ಯಕ್ತಿಯಾಗಿದ್ದರು. ಎನ್‌ಡಿಎ ಸೇರಿ ಗಮನ ಸೆಳೆದಿದ್ದ ಇವರು, ಹಲವು ಬಾರಿ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಬಾರಾಮತಿಯಿಂದ ನಿರಂತರವಾಗಿ ಶಾಸಕರಾಗಿ ಆಯ್ಕೆಯಾಗಿದ್ದ ಅವರ ಅಗಲಿಕೆ ರಾಜಕೀಯ ವಲಯದಲ್ಲಿ ಆಘಾತ ಮೂಡಿಸಿದೆ ಎಂದಿದ್ದಾರೆ.



