ಗದಗ: ಗದಗ ಕೇಂದ್ರ ಬಸ್ ನಿಲ್ದಾಣದ ಬಯಲು ಜಾಗೆಯಲ್ಲಿ ಕಸ ಹಾಗೂ ಹುಲ್ಲಿಗೆ ಬೆಂಕಿ ಹೊತ್ತಿಕೊಂಡ ಘಟನೆ ಇಂದು ನಡೆದಿದೆ. ಘಟನೆ ಕೆಲಕಾಲ ಪ್ರಯಾಣಿಕರು ಹಾಗೂ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿತು.
ಯಾರೋ ಕಿಡಿಗೇಡಿಗಳು ಬಿಸಾಡಿದ ಬೀಡಿ ಅಥವಾ ಸಿಗರೇಟ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗುತ್ತಿದೆ. ಪರಿಸ್ಥಿತಿ ಗಮನಿಸಿದ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಹೆಚ್ಚಿನ ಹಾನಿ ಸಂಭವಿಸದಂತೆ ಕ್ರಮ ಕೈಗೊಂಡಿದ್ದಾರೆ. ಈ ಪ್ರಕರಣ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಗೆ ಒಳಪಟ್ಟಿದೆ.



