ಬೆಂಗಳೂರು: ನಗರ ರಸ್ತೆಯಲ್ಲಿ ವಿದೇಶಿಗನೊಬ್ಬ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸಿ ಬೈಕ್ ಸವಾರಿ ನಡೆಸಿರುವ ದೃಶ್ಯಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ತಲೆಗೆ ಹೆಡ್ಫೋನ್ ಧರಿಸಿ, ಕೈಯಲ್ಲಿ ಸಿಗರೇಟ್ ಹಿಡಿದು ಯಾವುದೇ ಭಯವಿಲ್ಲದೆ ಬೈಕ್ ಚಲಾಯಿಸುತ್ತಿದ್ದ ಈ ವ್ಯಕ್ತಿ KA 42 EE 1361 ನೋಂದಣಿ ಸಂಖ್ಯೆಯ ಬೈಕ್ ಅನ್ನು ಓಡಿಸುತ್ತಿದ್ದಾನೆ. ಈ ಘಟನೆ ಸಿಲ್ಕ್ ಬೋರ್ಡ್ ಡಬಲ್ ಡೆಕ್ಕರ್ ಫ್ಲೈಓವರ್ ಬಳಿ ನಡೆದಿದೆ.
ಹಿಂಬದಿಯಿಂದ ಬರುತ್ತಿದ್ದ ಕಾರಿನಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಈ ಅಪಾಯಕಾರಿ ಸವಾರಿ ವಿಡಿಯೋ ಮಾಡಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆದ ನಂತರ ಸಾರ್ವಜನಿಕರು ಟಾಫಿಕ್ ನಿಯಮ ಉಲ್ಲಂಘನೆಗೆ ಆಕ್ರೋಶ ವ್ಯಕ್ತಪಡಿಸಿ, ಸಂಬಂಧಿತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಬೆಂಗಳೂರಿನ ರಸ್ತೆ ಸುರಕ್ಷತೆ ಬಗ್ಗೆ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.



