ಬೆಂಗಳೂರು: ಏಕಮುಖ ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಜನವರಿ 21ರಿಂದ ನಡೆದ ವಿಶೇಷ ಕಾರ್ಯಾಚರಣೆಯಲ್ಲಿ 9 ದಿನಗಳಲ್ಲಿ 23,000ಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ನಿನ್ನೆ ಮಾತ್ರ 3,000 ಪ್ರಕರಣ ದಾಖಲಾಗಿದ್ದು, ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಪ್ರಕರಣಗಳು ಕಂಡುಬಂದಿವೆ.
ಯಾವ ವಲಯದಲ್ಲಿ ಎಷ್ಟು?
ಉತ್ತರ: 329 (ಒಟ್ಟು 4,660)
ದಕ್ಷಿಣ: 1,327 (ಒಟ್ಟು 7,709)
ಪೂರ್ವ: 913 (ಒಟ್ಟು 6,832)
ಪಶ್ಚಿಮ: 499 (ಒಟ್ಟು 4,327)
ಏಕಮುಖ ಸಂಚಾರದಿಂದ ವಾಹನ ದಟ್ಟಣೆ, ಸವಾರರಿಗೆ ಸಮಸ್ಯೆ ಆಗುತ್ತಿದೆ ಎಂದು ಪ್ರಯಾಣಿಕರು ಸಂಚಾರ ಪೊಲೀಸರಿಗೆ ದೂರು ನೀಡುತ್ತಿದ್ದರು. ದಿನೇ ದಿನೇ ಒನ್‌ವೇ ಸವಾರರ ಕಿರಿಕಿರಿ ಜಾಸ್ತಿಯಾಗುತ್ತಿದ್ದಂತೆ ಪೊಲೀಸರು ಈಗ ಕಾರ್ಯಾಚರಣೆಗೆ ಇಳಿದಿದ್ದಾರೆ. ಒನ್ ವೇ ಸಂಚಾರದ ವಿರುದ್ಧ ವಿಶೇಷ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.



