ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಡಾ. ಸಿ.ಜೆ. ರಾಯ್ ಅವರ ಇಚ್ಛೆಯಂತೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿಂದೆ ತಮ್ಮ ಆಪ್ತರ ಬಳಿ ವ್ಯಕ್ತಪಡಿಸಿದ್ದ ಆಶಯದಂತೆ, ಡಾ. ಸಿ.ಜೆ. ರಾಯ್ ಅವರ ಅಂತ್ಯಸಂಸ್ಕಾರವನ್ನು ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ನೆರವೇರಿಸಲಾಗುತ್ತದೆ. ಮೃತ ರಾಯ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಕೋರಮಂಗಲದಲ್ಲಿರುವ ವೈಟ್ ಹೌಸ್ನಲ್ಲಿ ಇಡಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.
ವೈಟ್ ಗೋಲ್ಡ್ ಸಂಸ್ಥೆಯ ಮಾಲೀಕ ಹಾಗೂ ರಾಯ್ ಅವರ ಸಹೋದರ ಬಾಬು ಜೋಸೆಫ ಒಡೆತನದ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಡಾ. ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರ್ಯಾಂಡ್ನಲ್ಲಿ ನಡೆಯುವ ಸಾಧ್ಯತೆ ಇದ್ದು, ನಾಡಿನ ಪ್ರಮುಖ ಉದ್ಯಮಿಗಳು, ಚಿತ್ರರಂಗದ ಗಣ್ಯರು ಹಾಗೂ ರಾಜಕೀಯ ನಾಯಕರು ಭಾಗವಹಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.



