ದೇವನಹಳ್ಳಿ: ದೊಡ್ಡಬಳ್ಳಾಪುರ ತಾಲ್ಲೂಕಿನ ದಾಬಸ್ ಪೇಟೆ-ಹೊಸಕೋಟೆ ಹೆದ್ದಾರಿಯಲ್ಲಿ ಇಂದು ಅಪಘಾತ ಸಂಭವಿಸಿದ್ದು, ಟಿಪ್ಪರ್ ಮತ್ತು ಕಂಟೈನರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ.
ಮೆಣಸಿಗೇಟ್ ಮಾರ್ಗದ ಮೂಲಕ ಹಾದು ಹೋಗುತ್ತಿದ್ದ ಕಂಟೈನರ್‌ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಂಟೈನರ್ ರಸ್ತೆ ಮಧ್ಯದಲ್ಲಿ ಮುಗಿಚಿ ಬಿದ್ದಿದೆ.
ಅಪಘಾತದಲ್ಲಿ ಟಿಪ್ಪರ್ ಮುಂಭಾಗ ಸಂಪೂರ್ಣವಾಗಿ ಜಖಂ ಆಗಿದ್ದು, ಟಿಪ್ಪರ್ ಹಾಗೂ ಕಂಟೈನರ್ ಚಾಲಕರಿಗೆ ಗಾಯ ಸಂಭವಿಸಿದೆ. ಅದೃಷ್ಟವಶಾತ್, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಈ ಘಟನೆ ಎರಡು ವಾಹನಗಳು ದಾಬಸ್ ಪೇಟೆಯಿಂದ ಹೊಸಕೋಟೆಗೆ ಹೋಗುತ್ತಿದ್ದ ವೇಳೆ ನಡೆದಿದೆ ಎಂದು ತಿಳಿದು ಬಂದಿದೆ.
ಘಟನೆಯು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸ್ಥಳೀಯ ಠಾಣೆ ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣ ಮತ್ತು ಹಿನ್ನೆಲೆ ತನಿಖೆ ನಡೆಸುತ್ತಿದ್ದಾರೆ.



