HomeKalaburagiದೆಹಲಿ ಪೊಲೀಸರ ವೇಷದಲ್ಲಿ ದರೋಡೆ! ಕಲಬುರಗಿಯಲ್ಲಿ ಇರಾನಿ ಗ್ಯಾಂಗ್ ಅರೆಸ್ಟ್ – 15 ಲಕ್ಷ ರೂ.ಮೌಲ್ಯದ...

ದೆಹಲಿ ಪೊಲೀಸರ ವೇಷದಲ್ಲಿ ದರೋಡೆ! ಕಲಬುರಗಿಯಲ್ಲಿ ಇರಾನಿ ಗ್ಯಾಂಗ್ ಅರೆಸ್ಟ್ – 15 ಲಕ್ಷ ರೂ.ಮೌಲ್ಯದ ಚಿನ್ನ ಜಪ್ತಿ

For Dai;y Updates Join Our whatsapp Group

Spread the love

ಕಲಬುರಗಿ: ದೆಹಲಿ ಪೊಲೀಸರ ಸೋಗಿನಲ್ಲಿ ದರೋಡೆ ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಾಹನ ತಪಾಸಣೆ ನೆಪದಲ್ಲಿ ಜನರನ್ನು ತಡೆದು ಚಿನ್ನಾಭರಣ ದೋಚುತ್ತಿದ್ದ ಈ ಗ್ಯಾಂಗ್, ಕಲಬುರಗಿಯಲ್ಲಿ ದರೋಡೆಗೆ ಹೊಂಚು ಹಾಕಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದೆ.

ನಕಲಿ ಪೊಲೀಸ್ ಇನ್ಸ್‌ಪೆಕ್ಟರ್ ಐಡಿ ಕಾರ್ಡ್ ಸೃಷ್ಟಿಸಿಕೊಂಡು, ಇಬ್ಬರು ಸದಸ್ಯರು ಪೊಲೀಸ್ ಅಧಿಕಾರಿಗಳಂತೆ ವರ್ತಿಸುತ್ತಿದ್ದರು. ಉಳಿದವರು ಜನರ ಗಮನ ಬೇರೆಡೆ ಸೆಳೆದು ಚಿನ್ನಾಭರಣ ದೋಚುತ್ತಿದ್ದರು. ಈ ಗ್ಯಾಂಗ್ ವಾಹನಗಳಿಗೆ ನಕಲಿ ನಂಬರ್ ಪ್ಲೇಟ್ ಅಳವಡಿಸಿಕೊಂಡು, ಪ್ರತಿ ಬಾರಿ ದರೋಡೆಗೆ ಇಳಿಯುವಾಗ ಹೊಸ ಮೊಬೈಲ್, ಹೊಸ ಸಿಮ್ ಹಾಗೂ ನಂಬರ್ ಪ್ಲೇಟ್ ಬದಲಾಯಿಸುತ್ತಿದ್ದರು.
ಬಂಧಿತ ಆರೋಪಿಗಳನ್ನು ಜಹೀರ್ ಅಬ್ಬಾಸ್, ಅಲಿ ರಜಾಕ್, ಲಾಲ ಸಮೀರ್, ಖಸಿಂ ಜಾಫ್ರಿ, ಅಲಿಮಿರ್ಜಾ, ಜಾಫರ್ ಅಲಿ ಸೈಯದ್ ಹಾಗೂ ಜಾಫರ್ ಸೈಯದ್ ಎಂದು ಗುರುತಿಸಲಾಗಿದೆ.

ಬಂಧಿತರು ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳ ಮೂಲದವರಾಗಿದ್ದಾರೆ.
ಪ್ರಮುಖ ಆರೋಪಿ ಜಹೀರ್ ಅಬ್ಬಾಸ್ ಪರಳಿ ಮೂಲದವನಾಗಿದ್ದು, ಈ ಹಿಂದೆ 15 ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನಿಗೆ ಶಿಕ್ಷೆಯೂ ವಿಧಿಸಲಾಗಿತ್ತು. ಮತ್ತೊಬ್ಬ ಆರೋಪಿ ಲಾಲ್ ಸಲೀಮ್ ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದಲ್ಲೂ ಭಾಗಿಯಾಗಿದ್ದಾನೆ.
ಲಾಲ್ ಸಲೀಮ್‌ನ ಮಗಳಿಗೆ ಕಲಬುರಗಿಯಲ್ಲಿ ಮದುವೆ ಮಾಡಿಕೊಟ್ಟಿದ್ದ ಕಾರಣ ಗ್ಯಾಂಗ್ ಕಲಬುರಗಿಗೆ ಆಗಮಿಸಿತ್ತು. ಈ ವೇಳೆ ಮಹಬೂಬ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿನ್ನಾಭರಣ ದರೋಡೆ ನಡೆಸಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಏಳು ಜನರ ಗ್ಯಾಂಗ್ ಅನ್ನು ಬಂಧಿಸಿ, 15 ಲಕ್ಷ ರೂಪಾಯಿ ಮೌಲ್ಯದ 90 ಗ್ರಾಂ ಚಿನ್ನಾಭರಣ, ದರೋಡೆಗೆ ಬಳಸಿದ್ದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ ಎಂದು ಕಲಬುರಗಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್ ಡಿ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!