ಬೆಳಗಾವಿ:- ನಗರದ ಕ್ಲಬ್ ರಸ್ತೆಯ ಶಂಕರಾನಂದ ಪುತ್ಥಳಿ ಬಳಿ ಚಲಿಸುತ್ತಿದ್ದ ಲಾರಿ ಏರಿ ಸಿನಿಮಾ ಸ್ಟೈಲ್ನಲ್ಲಿ ಡ್ರೈವರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜರುಗಿದೆ.
ಅಯಾಜ್ ಸವಣೂರ(36) ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಎಂಟು ಜನರಿಂದ ಮಾರಣಾಂತಿಕ ಹಲ್ಲೆ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ ಹಿಂಡಲಗಾ ಬಳಿ ನಡೆದ ಅಪಘಾತವೇ ಘಟನೆಗೆ ಕಾರಣ ಎನ್ನಲಾಗಿದೆ. ಆ್ಯಕ್ಸಿಡೆಂಟ್ ಮಾಡಿ ಲಾರಿ ನಿಲ್ಲಿಸದೇ ಬಂದ ಕಾರಣ, ಬೆನ್ನುಹತ್ತಿ ಬಂದು ಚಾಲಕನ ಮೇಲೆ ನಡೆಸಿರುವ ಮಾಹಿತಿ ಲಭ್ಯವಾಗಿದೆ.
ಲಾರಿ ಚಾಲಕ ಅಯಾಜ್ ಸವಣೂರ ತೊಡೆ, ಕಿವಿ, ಬೆನ್ನು ಮತ್ತು ತಲೆ ಭಾಗಕ್ಕೆ ದುಷ್ಕರ್ಮಿಗಳು ಚಾಕುವಿನಿಂದ ಮನಬಂದತೆ ಇರಿದಿದ್ದು, ಲಾರಿ ಮೇಲೂ ಕಲ್ಲು ತೂರಾಟ ನಡೆಸಿ, ಗಾಜು ಒಡೆದು ಅಟ್ಟಹಾಸ ಮೆರೆದಿದ್ದಾರೆ. ಗಂಭೀರ ಗಾಯಗೊಂಡ ಅಯಾಜ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗ್ತಿದ್ದು, ಘಟನಾ ಸ್ಥಳಕ್ಕೆ ಬೆಳಗಾವಿ ಪೊಲೀಸರ ತಂಡ ಮತ್ತು ಸೋಕೋ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.



