Home Karnataka News ವಿಜಯಪುರ| ಅಗ್ನಿ ಅವಘಡಕ್ಕೆ ಸುಟ್ಟು ಕರಕಲಾದ ಸರ್ವಿಸ್ ಸೆಂಟರ್; 20ಕ್ಕೂ ಹೆಚ್ಚು ಕಾರುಗಳು ಭಸ್ಮ!

ವಿಜಯಪುರ| ಅಗ್ನಿ ಅವಘಡಕ್ಕೆ ಸುಟ್ಟು ಕರಕಲಾದ ಸರ್ವಿಸ್ ಸೆಂಟರ್; 20ಕ್ಕೂ ಹೆಚ್ಚು ಕಾರುಗಳು ಭಸ್ಮ!

0
ವಿಜಯಪುರ| ಅಗ್ನಿ ಅವಘಡಕ್ಕೆ ಸುಟ್ಟು ಕರಕಲಾದ ಸರ್ವಿಸ್ ಸೆಂಟರ್; 20ಕ್ಕೂ ಹೆಚ್ಚು ಕಾರುಗಳು ಭಸ್ಮ!
Spread the love

ವಿಜಯಪುರ:- ಸರ್ವಿಸ್‌ ಸೆಂಟರ್‌ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ವಿಜಯಪುರದಲ್ಲಿ ಜರುಗಿದೆ.

ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಹಣಮಂತ ಕನಮಡಿ ಎಂಬವರಿಗೆ ಸೇರಿದ ಹೆಚ್‌ಎಂಕೆ ಕಾರ್ ಸರ್ವಿಸ್‌ ಸೆಂಟರ್‌ನಲ್ಲಿ ಈ ಬೆಂಕಿ ದುರಂತ ಸಂಭವಿಸಿದೆ. ಘಟನೆಯಲ್ಲಿ ರಿಪೇರಿ ಹಾಗೂ ಸರ್ವಿಸ್‌ಗಾಗಿ ಬಂದಿದ್ದ 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಕರಕಲಾಗಿವೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಬೆಂಕಿಯ ಕೆನ್ನಾಲಿಗೆಗೆ ಇಡೀ ಸರ್ವೀಸ್ ಸೆಂಟರ್ ಸುಟ್ಟು ಭಸ್ಮವಾಗಿದೆ. ಒಂದು ಕೋಟಿಗೂ ಅಧಿಕ ಬೆಲೆ ಬಾಳುವ ಕಾರುಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here