HomeGadag Newsಮಕ್ಕಳ ವಿಷಯವಾರು ದೌರ್ಬಲ್ಯಗಳನ್ನು ವಿಶ್ಲೇಷಿಸಿ: ಡಾ. ಈಶ್ವರ ಉಳ್ಳಾಗಡ್ಡಿ

ಮಕ್ಕಳ ವಿಷಯವಾರು ದೌರ್ಬಲ್ಯಗಳನ್ನು ವಿಶ್ಲೇಷಿಸಿ: ಡಾ. ಈಶ್ವರ ಉಳ್ಳಾಗಡ್ಡಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳ ವಿಷಯವಾರು ದೌರ್ಬಲ್ಯಗಳನ್ನು ವಿಶ್ಲೇಷಿಸಿ, ಗುರಿ ನಿರ್ದಿಷ್ಟ ಕಾರ್ಯ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ತಿಳಿಸಿದರು.

ಗುರುವಾರ ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರ ಹಾಗೂ ಗದಗ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿಯಲ್ಲಿ ಗುಣಾತ್ಮಕ ಫಲಿತಾಂಶ ತರುವ ಉದ್ದೇಶದಿಂದ ಈ ಕಾರ್ಯಾಗಾರ ನಡೆಸಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಶೇಕಡಾವಾರು ಹೆಚ್ಚಿಸುವುದು ಪ್ರತಿಯೊಬ್ಬ ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಗುರುತಿಸಿ, ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಬೇಕು ಎಂದು ಸೂಚಿಸಿದರು.

ಶಾಲಾ ಮಟ್ಟದಲ್ಲಿ ನಿಯಮಿತ ಪರೀಕ್ಷೆಗಳು, ಮರುಪಠಣ ತರಗತಿಗಳು ಹಾಗೂ ಪೋಷಕರೊಂದಿಗೆ ಸಮನ್ವಯ ಸಭೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳ ಸಾಧನೆಯನ್ನು ಹೆಚ್ಚಿಸಬೇಕು. ಶಿಕ್ಷಕರು ಸಮಯ ಪಾಲನೆ, ಬದ್ಧತೆ ಮತ್ತು ಗುಣಮಟ್ಟದ ಬೋಧನೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ಜಿಲ್ಲೆಯ ಪ್ರತಿಯೊಂದು ಶಾಲೆಯೂ ಫಲಿತಾಂಶ ಸುಧಾರಣೆಗೆ ಸಮಗ್ರ ಪ್ರಯತ್ನ ಕೈಗೊಳ್ಳಬೇಕು. ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅಪರ ಆಯುಕ್ತರು ನಿರ್ದೇಶನ ನೀಡಿದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಾಗಾರದ ಉದ್ದೇಶವನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆ (ಧಾರವಾಡ) ಅಪರ ಆಯುಕ್ತರ ಕಚೇರಿ ನಿರ್ದೇಶಕರಾದ ಈಶ್ವರ ನಾಯಕ, ಡಯಟ್ ಪ್ರಾಚಾರ್ಯ ಜಿ.ಎಂ. ಮುಂದಿನಮನಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರು, ಸಮನ್ವಯಾಧಿಕಾರಿಗಳು, ಡಯಟ್ ಉಪನ್ಯಾಸಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರೌಢಶಾಲಾ ಮುಖ್ಯ ಶಿಕ್ಷಕರುಗಳು, ನೋಡಲ್ ಅಧಿಕಾರಿಗಳು ಹಾಜರಿದ್ದರು.

ಸಂವಾದದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು ಪಾಲ್ಗೊಂಡಿದ್ದರು.

ಮುಖ್ಯಾಂಶಗಳು

• ಗದಗದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಕುರಿತು ಮುಖ್ಯ ಶಿಕ್ಷಕರೊಂದಿಗೆ ಅಪರ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಸಂವಾದ.

• ಫಲಿತಾಂಶ ಹೆಚ್ಚಿಸುವುದು ಶಿಕ್ಷಕರ ಸಮೂಹ ಜವಾಬ್ದಾರಿ.

• ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಮತ್ತು ರಿಮಿಡಿಯಲ್ ತರಗತಿಗಳ ಆಯೋಜನೆ.

• ವಿಷಯವಾರು ಗುರಿ ನಿಗದಿ ಮಾಡಿ ನಿಯಮಿತ ಅಭ್ಯಾಸ ಪರೀಕ್ಷೆ ನಡೆಸಲು ಸೂಚನೆ.

• ಉತ್ತರ ಪತ್ರಿಕೆ ವಿಶ್ಲೇಷಣೆ ಮೂಲಕ ವಿದ್ಯಾರ್ಥಿಗಳ ತಪ್ಪು ಸರಿಗಳನ್ನು ಸರಿಪಡಿಸುವ ಕ್ರಮ.

• ಹಾಜರಾತಿ ಹೆಚ್ಚಿಸಲು ಪೋಷಕರೊಂದಿಗೆ ನಿರಂತರ ಸಂಪರ್ಕ.

• ಡಿಜಿಟಲ್ ಹಾಗೂ ಸ್ಮಾರ್ಟ್ ಕ್ಲಾಸ್ ಸೌಲಭ್ಯಗಳ ಪರಿಣಾಮಕಾರಿ ಬಳಕೆ, ಪ್ರತಿಯೊಂದು ಶಾಲೆಯೂ ಫಲಿತಾಂಶ ಆಧಾರಿತ ಕಾರ್ಯಯೋಜನೆ ರೂಪಿಸಲು ನಿರ್ದೇಶನ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!