ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಫೆಬ್ರವರಿ 7ರ ಶನಿವಾರ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ರಾಜಾಜಿನಗರ ವಿಭಾಗದ ವಿಜಯನಗರ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಅದರಂತೆ ಬಸವೇಶ್ವರ ನಗರ, ವಿಜಯನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ಆರ್‌ಪಿಸಿ ಲೇಔಟ್, ಬಿನ್ನಿ ಲೇಔಟ್, ಪ್ರಶಾಂತ್ ನಗರ, ಹೊಸಹಳ್ಳಿ, ತಿಮ್ಮೇನಹಳ್ಳಿ, ಎಂ.ಸಿ. ಲೇಔಟ್, ಮಾರೇನಹಳ್ಳಿ ಲೇಔಟ್, ವಿನಾಯಕ ಲೇಔಟ್, ಕಾವೇರಿಪುರ, ರಂಗನಾಥಪುರ, ಕೆಸಿಜಿ ಕೈಗಾರಿಕಾ ಪ್ರದೇಶ, ನಂಜಪ್ಪ ಕೈಗಾರಿಕಾ ಎಸ್ಟೇಟ್ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಕೋರಿದೆ.



