ಬೀದರ್:- ವೇಶ್ಯಾವಾಟಿಕೆ ಮಾಡುವಂತೆ ಕಿರುಕುಳ ಕೊಡುತ್ತಿದ್ದ ಅತ್ತೆಯಿಂದ ಮಾನಸಿಕವಾಗಿ ನೊಂದಿದ್ದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕವಲ್ಯಾಣ ನಗರದ ಓಂ ನಗರದಲ್ಲಿ ನಡೆದಿದೆ.
22 ವರ್ಷದ ಅಂಜನಾಬಾಯಿ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಮೃತಪಟ್ಟಿದ್ದಾರೆ. ಗಂಡ ಶೇಖರ್, ಅತ್ತೆ ಅರುಣಾಬಾಯಿ, ಮಾವ ಚಂದ್ರಕಾಂತ ಅವರ ಕಿರುಕುಳದಿಂದ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಂದೆ ವಿಜಯ್ ಕುಮಾರ್ ಬಸವಕಲ್ಯಾಣ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ದೂರಿನಲ್ಲಿ ಅತ್ತೆ ಅರುಣಾಬಾಯಿ ತನ್ನ ಮಗಳಿಗೆ ವೇಶ್ಯವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದಳು ಎಂದು ವಿಜಯ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಅನ್ವಯ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.



