ಬೆಂಗಳೂರು:- ರಾಜಧಾನಿ ಬೆಂಗಳೂರಿನ ಗಿರಿನಗರದ ಮೊದಲನೇ ಮುಖ್ಯ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮನೆಯ ಮುಂದೆ ಸೈಕಲ್ ಹೊಡೆಯುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿ ಹೊಡೆದಿದೆ. ರಸ್ತೆ ಬದಿ ನಿಂತಿದ್ದ ಮಹೀಂದ್ರಾ XUV300 ಕಾರನ್ನು ಚಾಲಕ ರಸ್ತೆಗಿಳಿಸುವ ವೇಳೆ ಸೈಕಲ್ ನಲ್ಲಿದ್ದ ಬಾಲಕ ವಿಕಾಸ್ ಅಡ್ಡ ಬಂದಿದ್ದಾನೆ. ಈ ವೇಳೆ ಕಾರು ಬಾಲಕನಿಗೆ ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ಗಾಯಗೊಂಡ ವಿಕಾಸ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಸಂಪೂರ್ಣ ದೃಶ್ಯವು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



