ಕೋಲಾರ:- ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಾಲೋನಿ ಗೇಟ್ ಬಳಿ ಬೊಲೆರೊ ಪಲ್ಟಿಯಾಗಿ ಮೂವರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ.
ಮುನಿಯಮ್ಮ, ವೆಂಕಟಪ್ಪ ಸೇರಿ ಮತ್ತೊಬ್ಬರು ಮೃತರು ಎಂದು ಗುರುತಿಸಲಾಗಿದೆ. ಹುಣಸೆಹಣ್ಣು ಬಿಡಿಸುವ ಕೆಲಸ ಮುಗಿಸಿಕೊಂಡು ಹೋಗುವಾಗ ದುರಂತ ಸಂಭವಿಸಿದ್ದು, ದುರಂತದಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಶ್ರೀನಿವಾಸಪುರ ಮತ್ತು ಆಂಧ್ರದ ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.



