ಬೆಂಗಳೂರು:- ಬೈಕ್ ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಉತ್ತರ ತಾಲೂಕಿನ ಬಾಗಲೂರು ಗ್ರಾಮದ ಗುಂಡಪ್ಪ ಕ್ರಾಸ್ನಲ್ಲಿ ನಡೆದಿದೆ.
ಮಾನಸಾ (29) ಮೃತ ಗರ್ಭಿಣಿ ಮಹಿಳೆ. ಭಾನುವಾರ ಬೆಳಗ್ಗೆ ಸಿಇಟಿ ಪರೀಕ್ಷೆ ಬರೆಯುವುದಕ್ಕೆ ಅಂತ ಮಾನಸಾ ಮನೆಯಿಂದ ಸ್ಕೂಟಿಯಲ್ಲಿ ಯಲಹಂಕದ ಕಡೆ ಬಾಗಲೂರು ಮೂಲಕ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಸಿಮೆಂಟ್ ಮಿಕ್ಸರ್ ಲಾರಿ, ಬೈಕ್ಗೆ ಡಿಕ್ಕಿ ಹೊಡೆದು ನಿಲ್ಲಿಸದೆ ಹಾಗೆ ಮುಂದಕ್ಕೆ ಸಾಗಿದ್ದು ಚಕ್ರದ ಅಡಿಗೆ ಸಿಲುಕಿ ಮಾನಸಾ ಸಾವನ್ನಪಿದ್ದಾರೆ.
ಈ ಕುರಿತು ಚಿಕ್ಕಜಾಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಲಾರಿ ಸಮೇತ ಚಾಲಕನನ್ನ ವಶಕ್ಕೆ ಪಡೆದಿದ್ದಾರೆ. ಇನ್ನು ಇತ್ತೀಚೆಗೆ ಲಾರಿ ಚಾಲಕರ ಅತಿವೇಗ, ಅಜಾಗರೂಕತೆಯಿಂದ ಈ ರೀತಿ ಅಪಘಾತಗಳು ಸಂಭವಿಸುತ್ತಿದ್ದು ಯಮಸ್ವರೂಪಿ ಲಾರಿಗಳಿಗೆ ಬ್ರೇಕ್ ಹಾಕುವಂತೆ ಸ್ಥಳಿಯರು ಒತ್ತಾಯಿಸಿದ್ದಾರೆ.



