ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಪವರ್ ಸಮಸ್ಯೆ ಬಿಟ್ಟು ಬಿಡದೇ ಕಾಡುತ್ತಿದ್ದು, ನಗರದ ಹಲವೆಡೆ ನಾಳೆಯೂ ಕರೆಂಟ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಕೆಪಿಟಿಸಿಎಲ್ ನಿಂದ ಜಾಲಹಳ್ಳಿ ವಿಭಾಗದ 66/11ಕೆವಿ ಎ೦.ಇ.ಐ ಸಬ್‌ಸ್ಟೇಷನ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುವುದರಿಂದ ಮಂಗಳವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ನಗರದ ಎಜಿಬಿಜಿ ಲೇಔಟ್, ಶೆಟ್ಟಿಹಳ್ಳಿ, ಮಲ್ಲಸಂದ್ರ, ಜಗದೇಸ್ ಲೇಔಟ್, ನಾಗದೇಸ್ ಲೇಔಟ್, ಬೋನ್‌ವಿಲ್, ಚಿಕ್ಕಸಂದ್ರ ಐರ್‌ಲೇಔಟ್, ಕಾವೇರಿ ಲೇಔಟ್, ಹೇಶ್ರವಿಶ್ರಾವೃತ ಲೇಔಟ್, 8ನೇ ಮೈಲ್, ತುಮಕೂರು ಮುಖ್ಯ ರಸ್ತೆ, ಮಹೇಶ್ವರಿ ನಗರ, ಕೆಂಪೇಗೌಡ ನಗರ, ಟಿ-ದಾಸರಹಳ್ಳಿ ಮೆಟ್ರೋ ಹಿಂಭಾಗ, ಹಳೆಯ ಮಸಿಡಿ, ಹೊಸ ಮಸಿಡಿ, ಪೈಪ್ ಲೈನ್ ರಸ್ತೆ, ಬೃಂದಾವನ ಲೇಔಟ್, ಮರಿಗ್ಮ್ ಅಪಾರ್ಟ್‌ಮೆಂಟ್, ಕಲ್ಯಾಣನಗರ ಬಾಗಲಗುಂಟೆ, ಕಿರ್ಲೋಸ್ಕರ್ ಲೇಔಟ್, ಎನ್‌ಎಂಎಚ್ ಲೇಔಟ್, ಸೌರ್ಯ ಲೇಔಟ್, ಮೀನಾಕ್ಷಿ ಲೇಔಟ್, ಸಿದ್ಧೇಶ್ವರ ಲೇಔಟ್, ಸಹ್ಯಾದ್ರಿ ಬಳಗ, ಸಪ್ತಗಿರಿ ವೈದ್ಯಕೀಯ ಕಾಲೇಜು, ಹೆಸರಘಟ್ಟ ಮುಖ್ಯರಸ್ತೆ, ಚಿಕ್ಕಬಾಣಾವರ, ಸೋಮಶೆಟ್ಟಿಹಳ್ಳಿ, ಕೆರೆಗುಡ್ಡದಹಳ್ಳಿ, ಮೇದರಹಳ್ಳಿ, ಗುಣಿಅಗ್ರಹಾರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಹಾಗೂ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.



