ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸಲಾಗುತ್ತಿದ್ದ ಸುಮಾರು 8 ಕೋಟಿ ರೂ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಇಮಿಗ್ರೇಷನ್ ಚೆಕಿಂಗ್ ವೇಳೆ ಅನುಮಾನಾಸ್ಪದವಾಗಿ ವರ್ತಿಸಿದ್ದ ಪ್ರಯಾಣಿಕರ ಲಗೇಜ್ ಪರಿಶೀಲನೆ ನಡೆಸಿದಾಗ, ಬ್ಯಾಗ್‌ನ ತಳಭಾಗದಲ್ಲಿ ಅಕ್ರಮವಾಗಿ ಗಾಂಜಾ ಮರೆಮಾಚಿ ಸಾಗಿಸಲಾಗುತ್ತಿರುವುದು ಪತ್ತೆಯಾಗಿದೆ.
ಈ ಸಂಬಂಧ ಹೆಚ್ಚಿನ ತನಿಖೆಯನ್ನು ಕಸ್ಟಮ್ಸ್ ಅಧಿಕಾರಿಗಳು ಮುಂದುವರಿಸಿದ್ದಾರೆ.



