ನೆಲಮಂಗಲ:- ಕಳೆದ ಜನವರಿ 27ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ರಾಮ್ ದೇವ್ ಜ್ಯುವೆಲರ್ಸ್ನಲ್ಲಿ ನಡೆದ ಭಯಾನಕ ದರೋಡೆ ಪ್ರಕರಣದಲ್ಲಿ ಗನ್ ಹಿಡಿದು 30 ಗ್ರಾಂ ಚಿನ್ನಾಭರಣ ಕದ್ದ 5 ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸ್ ತಂಡ ಏಳು ದಿನಗಳಲ್ಲಿ ಬಂಧಿಸಿದೆ.
ಬಂಧಿತರನ್ನು ರಾಜಸ್ತಾನಿ ಮೂಲದ ಅನೂಪ್ ಸಿಂಗ್, ರವಿ, ಅಂಕಿತ್, ಅರುಣ್, ಅನೂಪ್ ರಾಮ್ ಎಂದು ಗುರುತಿಸಲಾಗಿದೆ. ದರೋಡೆ ನಂತರ ರಾಜಸ್ಥಾನಕ್ಕೆ ತೆರಳಿದ ಆರೋಪಿಗಳನ್ನು ರಾಜಸ್ಥಾನದಲ್ಲಿ ಬಂಧಿಸಲಾಗಿದೆ.
ಕಳೆದ ವಾರವಷ್ಟೇ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ದಾಸಪುರದ ರಾಮ್ ದೇವ್ ಜ್ಯವೆಲರ್ಸ್ನಲ್ಲಿ ಈ ಭಯಾನಕ ದರೋಡೆ ನಡೆದಿತ್ತು. ದರೋಡೆಕೋರರು ಗನ್ ತೋರಿಸಿ 30 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಸದ್ಯ ಐವರು ಆರೋಪಿಗಳನ್ನ ಮಾದನಾಯಕನಹಳ್ಳಿ ಪೊಲಿಸರು ಬಂಧಿಸಿದ್ದಾರೆ.



