ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ ಮಾರುಕಟ್ಟೆ ಬಲವರ್ಧನೆಗಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷದ ಅವಧಿಗೆ ಪ್ರಚಾರ ರಾಯಭಾರಿಯಾಗಿ ನೇಮಿಸಿದೆ.
ಅವರು ಫೆ.10ರಿಂದ ಅಧಿಕೃತವಾಗಿ ತಮ್ಮ ಕಾರ್ಯಾರಂಭ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮೈಸೂರು ಸ್ಯಾಂಡಲ್ ಸೋಪ್ ನವನವೀನ ರೂಪದಲ್ಲಿಯೂ ಬಿಡುಗಡೆ ಮಾಡಲಾಗುವುದು. ಈ ಬಗ್ಗೆ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, KSDL ವಹಿವಾಟನ್ನು 2030ಕ್ಕೆ ₹5,000 ಕೋಟಿ ತಲುಪಿಸುವ ಗುರಿಯಿದೆ. ತಮನ್ನಾ ಅವರ ಸೆಲೆಬ್ರಿಟಿ ಪ್ರಭಾವದಿಂದ ಯುವಜನಾಂಗ ಹಾಗೂ ಉತ್ತರ ಭಾರತದ ಮಾರುಕಟ್ಟೆಗೆ ಉತ್ತೇಜನ ನೀಡಲಾಗುವುದು. ಕೆಎಸ್‌ಡಿಎಲ್ ಶತಮಾನಕ್ಕೂ ಮೇಲಾಗಿರುವ ಪರಂಪರೆಯ ಸಂಸ್ಥೆ.
ಪ್ರಸ್ತುತ 57 ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಮೈಸೂರು ಸ್ಯಾಂಡಲ್ ಸೋಪಿನಿಂದ ಕುಡಿಯುವ ನೀರಿನವರೆಗೂ ವ್ಯಾಪ್ತಿಯಾಗಿದೆ. ಮುಂದಿನ ಎರಡು ವರ್ಷಗಳಲ್ಲಿ ತಮನ್ನಾ ಇತರ ಖಾಸಗಿ ಕಂಪನಿಗಳಲ್ಲಿನ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.



