ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಸೋಮವಾರ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದ ವಾರ್ಡ್ ನಂ. 3 ಮತ್ತು 4ರ ಮಡ್ಡಿಗೇರಿ ಓಣಿ ಮತ್ತು ಉಳ್ಳಾಗಡ್ಡಿ ಓಣಿಯಲ್ಲಿ ಮತದಾರರ ಮ್ಯಾಪಿಂಗ್ ಕಾರ್ಯವನ್ನು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಹಾಗೂ ಶಿರಹಟ್ಟಿ ಮತದಾರರ ನೋಂದಣಿ ಅಧಿಕಾರಿ ಡಾ. ನಂದಾ ಹಣಬರಟ್ಟಿ ಮತ್ತು ತಹಸೀಲ್ದಾರ ಕೆ. ರಾಘವೇಂದ್ರ ರಾವು ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ, ಮತದಾರರ ಮ್ಯಾಪಿಂಗ್ ಹಾಗೂ ಪ್ರೋಜಿನಿ ಮ್ಯಾಪಿಂಗ್ ಮಾಡುವ ಕೆಲಸ ಪ್ರಗತಿಯಲ್ಲಿದ್ದು, ಎಲ್ಲ ಮತದಾರರು ತಮ್ಮ 2002ರ ಮತದಾರರ ಪಟ್ಟಿಯ ಸಂಖ್ಯೆ, ಕ್ರಮ ಸಂಖ್ಯೆ ಹಾಗೂ ಮದುವೆಯಾಗಿ ಬಂದ ಮಹಿಳೆಯರು ತಮ್ಮ ತಂದೆ-ತಾಯಿ 2002ರಲ್ಲಿ ಇರುವ ಭಾಗದ ಸಂಖ್ಯೆ, ಕ್ರಮ ಸಂಖ್ಯೆಯನ್ನು ತಮ್ಮ ವ್ಯಾಪ್ತಿಯ ಬಿಎಲ್‌ಓ ಅವರಿಗೆ ಅಥವಾ ಗ್ರಾಮ ಆಡಳಿತ ಅಧಿಕಾರಿಗಳಿಗೆ ನೀಡಿ ತಮ್ಮ ಮ್ಯಾಪಿಂಗ್ ಆದ ಬಗ್ಗೆ ಪರಿಶೀಲನೆ ಮಾಡಬೇಕೆಂದು ಹೇಳಿದರು.



