ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ದೊಡ್ಡಕಮ್ಮನಹಳ್ಳಿ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಸೋಮವಾರ ಮಧ್ಯರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.
ಘಟನೆ ನಡೆದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಬೆಂಕಿಯ ತೀವ್ರತೆಯಿಂದಾಗಿ ಇನ್ನೂ ಸಂಪೂರ್ಣವಾಗಿ ಹತೋಟಿಗೆ ಬಂದಿಲ್ಲ ಎಂದು ತಿಳಿದುಬಂದಿದೆ.
ಪ್ಲಾಸ್ಟಿಕ್ ಗೋಡೌನ್ ಸಮೀಪದಲ್ಲೇ ಗ್ಯಾಸ್ ಸಿಲಿಂಡರ್ ಗೋಡೌನ್ ಇದ್ದುದರಿಂದ, ಬೆಂಕಿ ಅತ್ತ ವ್ಯಾಪಿಸಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಆದರೆ ಸಮಯಕ್ಕೆ ಸರಿಯಾಗಿ ಕೈಗೊಂಡ ಕ್ರಮಗಳಿಂದ ದೊಡ್ಡ ದುರಂತವೊಂದು ತಪ್ಪಿದೆ.



