ನವದೆಹಲಿ: ಟಿ20 ವಿಶ್ವಕಪ್‌ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯಾ ತಂಡಗಳು ಮುಖಾಮುಖಿಯಾಗಲಿವೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯಕ್ಕೆ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಎರಡು ಬದಲಾವಣೆ ಮಾಡುವ ಸಾಧ್ಯತೆ ಇದೆ.
ಮೊದಲ ಪಂದ್ಯದಿಂದ ಹೊರಗುಳಿದಿದ್ದ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇನ್ನೊಂದೆಡೆ, ಮೊದಲ ಪಂದ್ಯದಲ್ಲಿ ಆಡಿದ್ದ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರು ಈ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಮೂರನೇ ಕ್ರಮಾಂಕದಲ್ಲಿ ತಿಲಕ್ ವರ್ಮಾ ಬ್ಯಾಟ್ ಬೀಸಲಿದ್ದು, ನಾಲ್ಕನೇ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯಲಿದ್ದಾರೆ.
ಮಧ್ಯಮ ಕ್ರಮಾಂಕದಲ್ಲಿ ರಿಂಕು ಸಿಂಗ್ ಅವಕಾಶ ಪಡೆಯುವ ನಿರೀಕ್ಷೆಯಿದೆ. ಆಲ್‌ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ, ಶಿವಂ ದುಬೆ ಹಾಗೂ ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಜಸ್‌ಪ್ರೀತ್ ಬುಮ್ರಾ ಆಗಮನದಿಂದ ಮೊಹಮ್ಮದ್ ಸಿರಾಜ್ ಹೊರಗುಳಿಯುವ ಸಾಧ್ಯತೆ ಇದೆ. ಅರ್ಷದೀಪ್ ಸಿಂಗ್ ಹಾಗೂ ವರುಣ್ ಚಕ್ರವರ್ತಿ ತಂಡದಲ್ಲಿ ಸ್ಥಾನ ಕಾಯ್ದುಕೊಳ್ಳುವ ನಿರೀಕ್ಷೆಯಿದೆ.
ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ಇಶಾನ್ ಕಿಶನ್
- ಸಂಜು ಸ್ಯಾಮ್ಸನ್
- ತಿಲಕ್ ವರ್ಮಾ
- ಸೂರ್ಯಕುಮಾರ್ ಯಾದವ್
- ರಿಂಕು ಸಿಂಗ್
- ಹಾರ್ದಿಕ್ ಪಾಂಡ್ಯ
- ಶಿವಂ ದುಬೆ
- ಅಕ್ಷರ್ ಪಟೇಲ್
- ಜಸ್‌ಪ್ರೀತ್ ಬುಮ್ರಾ
- ಅರ್ಷದೀಪ್ ಸಿಂಗ್
- ವರುಣ್ ಚಕ್ರವರ್ತಿ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್‌ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.



