ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ವಿ.ಜಿ.ಶಿವಪ್ರಕಾಶ್ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತರ, ಬಿಜೆಪಿ ಶಾಸಕ ಭೈರತಿ ಬಸವರಾಜ್ ನನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದೆ ಪರಾರಿಯಾಗಿದ್ದ ಬಸವರಾಜ್ನ ಅಹಮದಾಬಾದ್ನಿಂದ ಬೆಂಗಳೂರಿಗೆ ಆಗಮನದ ಮಾಹಿತಿ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಯಿತು. ಸಂಜೆ 7 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಲ್ಯಾಂಡ್ ಆದ ನಂತರ, ಸಿಐಡಿ ತಂಡವು ಅವರನ್ನು ಟರ್ಮಿನಲ್ ಒಳಗಡೆಯೇ ವಶಕ್ಕೆ ಪಡೆದಿದೆ.
ಈ ವೇಳೆ, ಭೈರತಿ ಬಸವರಾಜ್ನನ್ನು ನೇರವಾಗಿ ಸಿಐಡಿ ಕಚೇರಿಗೆ ಕರೆದುಕೊಂಡು ಹೋಗಿದ್ದು, ವೈದ್ಯಕೀಯ ಪರಿಶೀಲನೆ ನಂತರ ಶೀಘ್ರವೇ ಜಡ್ಜ್ ಎದುರು ಹಾಜರಾತಿ ನಡೆಯಲಿದೆ. ಸಿಐಡಿ ಜಡ್ಜ್ ಮುಂದಿನ ರಿಮ್ಯಾಂಡ್ ಅರ್ಜಿಯನ್ನು ಸಲ್ಲಿಸಲಿದೆ.



