ಬೆಂಗಳೂರು:- ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಇಂದು ಬೆಳಗಿನ ಜಾವ ಭೀಕರ ಸರಣಿ ಅಪಘಾತ ಸಂಭವಿಸಿ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಬೈಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸೇರಿ ಒಟ್ಟು ಏಳು ಮಂದಿ ಜೀವ ಕಳೆದುಕೊಂಡಿದ್ದಾರೆ.
ಅಪಘಾತಕ್ಕೀಡಾದ ಕಾರು ಹೊಸಕೋಟೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಕಾರಿನಲ್ಲಿದ್ದ ಆರು ಮಂದಿ ಹಾಗೂ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತದೇಹಗಳನ್ನು ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.



