ಟಿ20 ವಿಶ್ವಕಪ್ 2026ರಲ್ಲಿ ಅಮೆರಿಕ ತಂಡ ಐತಿಹಾಸಿಕ ಗೆಲುವು ದಾಖಲಿಸಿದೆ.
ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನೆದರ್ಲೆಂಡ್ಸ್ ತಂಡವು ಅಮೆರಿಕವನ್ನು ಮೊದಲು ಬ್ಯಾಟಿಂಗ್ಗೆ ಆಹ್ವಾನಿಸಿತು. ಮೊದಲು ಬ್ಯಾಟ್ ಮಾಡಿದ ಅಮೆರಿಕ ಪರ ಸಾಯಿ ತೇಜ 79 ರನ್ಗಳ ಭರ್ಜರಿ ಇನಿಂಗ್ಸ್ ಆಡಿದ್ದು, ತಂಡವು 20 ಓವರ್ಗಳಲ್ಲಿ 196 ರನ್ಗಳ ಬಲಿಷ್ಠ ಮೊತ್ತ ಕಲೆಹಾಕಿತು. ಕಠಿಣ ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್ 15.5 ಓವರ್ಗಳಲ್ಲಿ ಕೇವಲ 103 ರನ್ಗಳಿಗೆ ಆಲೌಟ್ ಆಯಿತು. ಪರಿಣಾಮ ಅಮೆರಿಕ 93 ರನ್ಗಳ ಭರ್ಜರಿ ಜಯ ಸಾಧಿಸಿತು.
ಈ ಜಯದೊಂದಿಗೆ ಅಮೆರಿಕ ತಂಡ ಟಿ20 ವಿಶ್ವಕಪ್ ಇತಿಹಾಸದಲ್ಲೇ ಗರಿಷ್ಠ ರನ್ಗಳ ಅಂತರದಿಂದ ಗೆದ್ದ ಅಸೋಸಿಯೇಟ್ ರಾಷ್ಟ್ರ ಎಂಬ ವಿಶ್ವ ದಾಖಲೆ ನಿರ್ಮಿಸಿದೆ. ಇದಕ್ಕೂ ಮೊದಲು ಈ ದಾಖಲೆ ನೇಪಾಳ ತಂಡದ ಹೆಸರಿನಲ್ಲಿ ಇತ್ತು. 2014ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ನೇಪಾಳವು ಹಾಂಗ್ ಕಾಂಗ್ ವಿರುದ್ಧ 80 ರನ್ಗಳ ಜಯ ಸಾಧಿಸಿ ಈ ದಾಖಲೆಯನ್ನು ತನ್ನದಾಗಿಸಿಕೊಂಡಿತ್ತು. ಇದೀಗ ನೆದರ್ಲೆಂಡ್ಸ್ ವಿರುದ್ಧ 93 ರನ್ಗಳ ಅಂತರದಿಂದ ಗೆದ್ದು ಅಮೆರಿಕ ತಂಡ ಹೊಸ ಇತಿಹಾಸ ರಚಿಸಿದೆ.



