ಲಕ್ನೋ:- ಉತ್ತರ ಪ್ರದೇಶದ ನೋಯ್ಡಾದಲ್ಲಿ ಪ್ರೇಮಿಗಳ ದಿನದಂದೇ ದುರಂತವೊಂದು ನಡೆದಿದ್ದು, ಶೂಟ್ ಮಾಡಿಕೊಂಡು ಪ್ರೇಮಿಗಳು ಕಾರಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ.
ನಿಲ್ಲಿಸಿದ್ದ ಕಾರಿನಲ್ಲಿ ಮೃತದೇಹಗಳನ್ನು ಕಂಡು ತಕ್ಷಣ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಪರಿಶೀಲನೆ ವೇಳೆ, ಇಬ್ಬರೂ ಗುಂಡೇಟಿಗೆ ಬಲಿಯಾದರೆಂದು ದೃಢಪಟ್ಟಿದ್ದು, ಯುವಕ ಮೊದಲು ಯುವತಿಗೆ ಗುಂಡು ಹಾರಿಸಿ, ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಯುವಕನ ಕೈಯಿಂದ ಪಿಸ್ತೂಲ್ ವಶಪಡಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.



