ಬೆಂಗಳೂರು:- ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ಬೆಂಗಳೂರಿನ ಯಲಹಂಕದಲ್ಲಿ ಜರುಗಿದೆ.
ಘಟನೆಯಲ್ಲಿ ಬಾಗೇಪಲ್ಲಿ ಮೂಲದ ದಂಪತಿಗಳಿಬ್ಬರು ಗಾಯಗೊಂಡಿದ್ದಾರೆ. ಕೃಷ್ಣಮ್ಮ-ರಾಜು ಗಾಯಗೊಂಡ ಪತಿ ಪತ್ನಿ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಯಲಹಂಕದ ಚೌಡೇಶ್ವರಿ ಲೇಔಟ್‌ನ ಮನೆಯೊಂದರಲ್ಲಿ ಅನಿಲ ಸೋರಿಕೆಯಿಂದ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟ ಹೇಗಾಯಿತು ಅನ್ನೋದರ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ. ಆದ್ರೆ ಬೆಳಗ್ಗೆ ಗ್ಯಾಸ್ ಹಚ್ಚುವಾಗ ಅಥವಾ ಲೈಟ್ ಆನ್ ಮಾಡಿದಾಗ ಗ್ಯಾಸ್ ಸಂಭವಿಸಿರಬಹುದು ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಸ್ಪೋಟದ ತೀವ್ರತೆಗೆ ಮನೆಗೋಡೆಯ ಒಂದು ಭಾಗವೇ ಛಿದ್ರವಾಗಿದೆ. ಬಳಿಕ ಘಟನೆಯಲ್ಲಿ ಗಾಯಗೊಂಡಿದ್ದ ಕೃಷ್ಣಮ್ಮ-ರಾಜು ದಂಪತಿಯನ್ನ ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಬಾಗೇಪಲ್ಲಿ ಕೃಷ್ಣಮ್ಮ-ರಾಜು ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು ಎಂದು ತಿಳಿದು ಬಂದಿದೆ.
ಇನ್ನೂ ಸ್ಥಳಕ್ಕೆ ಯಲಹಂಕ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.



