HomeGadag Newsಮತಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ: ಮಿಥುನ ಪಾಟೀಲ

ಮತಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ: ಮಿಥುನ ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಡಂಬಳ: ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಐತಿಹಾಸಿಕ ಹಿನ್ನೆಲೆ ಹೊಂದಿರುವ ಹಿರೇವಡ್ಡಟ್ಟಿ ಗ್ರಾಮದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ರಸ್ತೆ ನಿರ್ಮಾಣ, ಆರೋಗ್ಯ, ಕೃಷಿ, ಶಿಕ್ಷಣ ಸೇರಿದಂತೆ ಕ್ಷೇತ್ರದ ಅಭಿವೃದ್ಧಿ ಮಾಡುವ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದು ರೋಣ ಗ್ಯಾರಂಟಿ ಸಮಿತಿ ಅಧ್ಯಕ್ಷ ಮಿಥುನ ಜಿ. ಪಾಟೀಲ ಹೇಳಿದರು.

ಡಂಬಳ ಹೋಬಳಿ ಹಿರೇವಡ್ಡಟ್ಟಿ ಗ್ರಾಮದ ಶ್ರೀವೀರಭದ್ರೇಶ್ವರ ದೇವಸ್ಥಾನದ ಯುವಕ ಮಂಡಳಿ ಹಾಗೂ ಭಜನಾ ಸಂಘದ ಸಮುದಾಯ ಭವನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 50 ಲಕ್ಷ ರೂಗಳ ಅನುದಾನದ ಕಾಮಗಾರಿಯ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸಮುದಾಯ ಭವನದ ಕಟ್ಟಡ ಸುಸಜ್ಜಿತವಾಗಿ ನಿರ್ಮಾಣವಾಗಬೇಕು. ಗ್ರಾಮದ ಮನಕವಾಡ ಮಠಕ್ಕೂ ಈಗಾಗಲೇ 20 ಲಕ್ಷ ರೂ ಅನುದಾನ ನೀಡಲಾಗಿದೆ. ಇನ್ನೂ ಹೆಚ್ಚಿನ ಅನುದಾನ ನೀಡಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಇಂತಹ ಧಾರ್ಮಿಕ ಕೇಂದ್ರಗಳಿಂದ ನಿರಂತರವಾಗಿ ಸಾಮಾಜಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಹೇಳಿದರು.

ಪರಮಪೂಜ್ಯ ವೀರೇಶ್ವರ ಶಿವಾಚಾರ್ಯ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಈ ಭಾಗದ ಗ್ರಾಮದ ಹಲವು ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕಾರ್ಯಗಳಿಗೆ ಆದ್ಯತೆ ನೀಡುತ್ತಿರುವುದು ಪ್ರಶಂಸನೀಯ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಹನಮರಡ್ಡಿ ಮೇಟಿ, ಲೋಕಪ್ಪ ನಂದಿಕೋಲ, ಶಿವಪ್ಪ ಅಂಕದ, ಸುರೇಶ ಕವಲೂರ, ಶರಣಪ್ಪ ನಂದಿಕೋಲ, ವೆಂಕಪ್ಪ ಬಳ್ಳಾರಿ, ಅಬ್ದುಲ್‌ಸಾಬ್ ಕಲಕೇರಿ, ಗುಳಪ್ಪ ಸಂಗನಾಳ, ಶರಣಪ್ಪ ಅಂಕದ, ಶ್ರೀವೀರಭದ್ರೇಶ್ವರ ದೇವಸ್ಥಾನದ ಯುವಕ ಮಂಡಳಿ ಹಾಗೂ ಭಜನಾ ಸಂಘದ ಅಧ್ಯಕ್ಷ ಹಾಲೇಶ ಹಲಿಗಿಲಿವಾಡ, ಉಪಾಧ್ಯಕ್ಷ ಶ್ರಾವಣ ಶಿವಳ್ಳಿ, ಕಾರ್ಯದರ್ಶಿ ಮಲ್ಲಣ್ಣ ಅಂಕದ, ಖಜಾಂಚಿ ಪ್ರಶಾಂತ ಹಂಚಿನಾಳ, ಉಮೇಶ ಕಿರಿಕಿರಿ, ಶರಣಪ್ಪ ಕುಂದ್ರಹಳ್ಳಿ, ಮಂಜುನಾಥ ಮೇವುಂಡಿ, ಸುರೇಶ ಮುಪ್ಪಿನಎಣ್ಣಿ, ಈರಣ್ಣ ಕಾಮಣ್ಣವರ, ಸುರೇಶಪ್ಪ ಬಣವಿ, ಚನ್ನಪ್ಪ ಜುಂಜುರಿ ಗುತ್ತಿಗೆದಾರ ಫಕ್ಕಿರಸಾಬ್ ಕೊಪ್ಪಳ, ಗ್ರಾಮದ ಹಿರಿಯರು, ಯುವಕರು ಇದ್ದರು.

ಸರ್ಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ, ಜಿಲ್ಲಾಧ್ಯಕ್ಷ ಬಸವರಾಜ ಬಳ್ಳಾರಿ ಮಾತನಾಡಿ, ರೋಣ ಮತಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿವೆ. ಶಾಸಕ ಜಿ.ಎಸ್. ಪಾಟೀಲರ ಶಿಫಾರಸ್ಸಿನ ಮೇರೆಗೆ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದ ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಿಯವರಿಗೂ ಗ್ರಾಮಸ್ಥರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇವೆ. ನಮ್ಮ ಗ್ರಾಮ ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಮಾದರಿ ಗ್ರಾಮವನ್ನಾಗಿ ಮಾಡಲು ಗ್ರಾಮದ ಪ್ರತಿಯೊಬ್ಬರೂ ಪಕ್ಷಾತೀತವಾಗಿ ಶ್ರಮಿಸೋಣ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!