ಬೆಂಗಳೂರು: ಮಾರ್ಚ್ 6ರಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಅಧಿಕೃತ ವೇಳಾಪಟ್ಟಿಯ ಪ್ರಕಾರ, ಅಂದು ಬೆಳಗ್ಗೆ 10:15ಕ್ಕೆ ಬಜೆಟ್ ಮಂಡನೆ ಆರಂಭವಾಗಲಿದೆ. ಕಳೆದ ಬಾರಿ ಕೂಡ ಮಾರ್ಚ್ 7ರಂದು ಇದೇ ಸಮಯದಲ್ಲಿ ಬಜೆಟ್ ಮಂಡನೆ ನಡೆದಿತ್ತು. ಈ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ, ಒಟ್ಟು 14 ದಿನಗಳ ಕಾಲ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ ಈಗಾಗಲೇ ಇಲಾಖಾವಾರು ಪೂರ್ವಭಾವಿ ಸಭೆಗಳನ್ನು ನಡೆಸುತ್ತಿದ್ದು, ಮುಂಬರುವ ಚುನಾವಣೆಯನ್ನು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಗಮನದಲ್ಲಿ ಇಟ್ಟುಕೊಂಡು ಈ ಬಜೆಟ್ ವಿಶೇಷ ಮಹತ್ವ ಹೊಂದಿದೆ.



