ಬೆಂಗಳೂರು: ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಹಾಗೂ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ ನಡೆಯಲಿವೆ ಎಂದು ಮಾಹಿತಿ ನೀಡಿದರು.
ದ್ವಿತೀಯ ಪಿಯುಸಿ ಪರೀಕ್ಷೆ – ವೇಳಾಪಟ್ಟಿ
- ಫೆಬ್ರವರಿ 28 – ಕನ್ನಡ, ಅರೇಬಿಕ್
- ಮಾರ್ಚ್ 2 – ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
- ಮಾರ್ಚ್ 3 – ಇಂಗ್ಲಿಷ್
- ಮಾರ್ಚ್ 4 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
- ಮಾರ್ಚ್ 5 – ಇತಿಹಾಸ
- ಮಾರ್ಚ್ 6 – ಭೌತಶಾಸ್ತ್ರ
- ಮಾರ್ಚ್ 7 – ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ
- ಮಾರ್ಚ್ 9 – ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
- ಮಾರ್ಚ್ 10 – ಅರ್ಥಶಾಸ್ತ್ರ
- ಮಾರ್ಚ್ 11 – ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ
- ಮಾರ್ಚ್ 12 – ಹಿಂದಿ
- ಮಾರ್ಚ್ 13 – ರಾಜ್ಯಶಾಸ್ತ್ರ
- ಮಾರ್ಚ್ 14 – ಲೆಕ್ಕಶಾಸ್ತ್ರ, ಗಣಿತ
- ಮಾರ್ಚ್ 16 – ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ
- ಮಾರ್ಚ್ 17 – ಹಿಂದುಸ್ತಾನಿ ಸಂಗೀತ, ರೀಟೇಲ್, ಆಟೋಮೊಬೈಲ್, ಆರೋಗ್ಯ ರಕ್ಷಣೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆ – ವೇಳಾಪಟ್ಟಿ (ಪರೀಕ್ಷೆ 1)
- ಮಾರ್ಚ್ 18 – ಪ್ರಥಮ ಭಾಷೆ
- ಮಾರ್ಚ್ 23 – ವಿಜ್ಞಾನ
- ಮಾರ್ಚ್ 25 – ದ್ವಿತೀಯ ಭಾಷೆ
- ಮಾರ್ಚ್ 28 – ಗಣಿತ
- ಮಾರ್ಚ್ 30 – ತೃತೀಯ ಭಾಷೆ
- ಏಪ್ರಿಲ್ 2 – ಸಮಾಜ ವಿಜ್ಞಾನ
ಎಸ್‌ಎಸ್‌ಎಲ್‌ಸಿ ಪರೀಕ್ಷೆ – ವೇಳಾಪಟ್ಟಿ (ಪರೀಕ್ಷೆ 2)
- ಮೇ 18 – ಪ್ರಥಮ ಭಾಷೆ
- ಮೇ 19 – ವಿಜ್ಞಾನ
- ಮೇ 20 – ದ್ವಿತೀಯ ಭಾಷೆ
- ಮೇ 21 – ಗಣಿತ
- ಮೇ 22 – ತೃತೀಯ ಭಾಷೆ
- ಮೇ 23 – ಸಮಾಜ ವಿಜ್ಞಾನ
ವಿದ್ಯಾರ್ಥಿಗಳು ವೇಳಾಪಟ್ಟಿಯಂತೆ ಸಿದ್ಧತೆ ನಡೆಸುವಂತೆ ಸಚಿವರು ಕರೆ ನೀಡಿದ್ದಾರೆ.



