ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಹೊಸುರು ವೃತ್ತದಲ್ಲಿ 4 ಪಿಲ್ಲರ್‌ಗಳನ್ನು ಅಳವಡಿಸುವ ಕಾಮಗಾರಿ ಮುಕ್ತಾಯದ ಹಂತದಲ್ಲಿದೆ. ಟ್ರಾಫಿಕ್ ಸಮಸ್ಯೆಯಾಗದಂತೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಮುಂದಿನ ಒಂದು ವಾರದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು. ಮುಂದಿನ 6 ತಿಂಗಳಲ್ಲಿ ಮೇಲ್ಸೇತುವೆ ಕಾಮಗಾರಿಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.



