ಗದಗ:- ಗ್ಯಾಸ್ ಸಿಲಿಂಡರ್ ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಜಿಲ್ಲೆಯ ರೋಣ ತಾಲ್ಲೂಕಿನ ಕೊತಬಾಳ ಗ್ರಾಮದ ಅಂಗಡಿಯೊಂದರಲ್ಲಿ ಜರುಗಿದೆ.
ಬೆಂಕಿ ನೋಡಿದ ಗ್ರಾಮಸ್ಥರು ಭಯಭೀತರಾದರು, ಜೊತೆಗೆ ಸುತ್ತಲಿನ ವಾಹನ ಚಾಲಕರೂ ಸ್ಫೋಟ ಸಂಭವಿಸಬಹುದು ಎಂಬ ಭೀತಿಯಿಂದ ತಮ್ಮ ವಾಹನಗಳನ್ನು ದೂರದಲ್ಲಿ ನಿಲ್ಲಿಸಿದ್ದರು. ಅದೇ ಸಂದರ್ಭದಲ್ಲಿ ಅಗ್ನಿಶಾಮಕದಳದ ಪ್ರವೀಣ್ ಹೊಸಕೋಟೆ ಕರ್ತವ್ಯಕ್ಕೆ ತೆರಳುತ್ತಿರುವಾಗ ಮಾರ್ಗ ಮದ್ಯೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ತಮ್ಮ ಜೀವದ ಹಂಗನ್ನು ತೊರೆದು ಗ್ಯಾಸ್ ಸಿಲಿಂಡರ್ ನ ರೆಗ್ಯುಲೇಟರ್ ಬಂದ್ ಮಾಡಿ ಭಾರೀ ಅನಾಹುತ ತಪ್ಪಿಸಿದ್ದಾರೆ.
ಅಗ್ನಿಶಾಮಕ ದಳ ಸಿಬ್ಬಂದಿಯ ಕಾರ್ಯಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



