ಮಡಿಕೇರಿ:- ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ವಾಹನದ ಕಾಗದಪತ್ರಗಳು ಇಲ್ಲದ ಹಿನ್ನೆಲೆ ಪೊಲೀಸರನ್ನು ನೋಡಿ ಗಾಬರಿಯಾದ ಬೈಕ್ ಸವಾರ ಏಕಾಏಕಿ ವಾಹನ ತಿರುಗಿಸುವ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.
ಮರೂರು ಗ್ರಾಮದ ನಟೇಶ್ (31) ಮೃತ ವ್ಯಕ್ತಿ. ಅವರ ಪತ್ನಿ ದಿವ್ಯಾ (30) ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ದಿವ್ಯಾರ ಎರಡೂ ಕಾಲುಗಳು ಮುರಿದಿವೆ ಎನ್ನಲಾಗಿದೆ.
ಈ ಬಗ್ಗೆ ಕುಶಾಲನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



