ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದಲ್ಲಿ ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ಜರುಗಿದೆ.
ಅಭೀಶ್ ಗಾಯಗೊಂಡ ಬಾಲಕನಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಮನೆ ಅಂಗಳದಲ್ಲಿ ಬಾಲಕ ಅಭೀಶ್ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್ ಎಂದು ಶಂಕಿಸಲಾಗಿದೆ.
ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.



