ಹಾಸನ: ಇತಿಹಾಸ ನಿರ್ಮಿಸಿದ ಹಾಸನಾಂಬೆ ದೇವಸ್ಥಾನ ಉತ್ಸವ ಇದೀಗ ಅವ್ಯವಹಾರದ ನೆರಳಿಗೆ ಸಿಲುಕಿದೆ. ವಿದ್ಯುತ್ ದೀಪಾಲಂಕಾರ ಟೆಂಡರ್‌ನಲ್ಲಿ ಭಾರೀ ಗೋಲ್ಮಾಲ್ ನಡೆದಿದೆ ಎಂದು ಆರ್‌ಟಿಐ ಕಾರ್ಯಕರ್ತ ಮನು ಆರೋಪಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ಮಹಾನಗರ ಪಾಲಿಕೆ ಕಚೇರಿಯಲ್ಲೇ ಅಧಿಕಾರಿಗಳ ವಿಚಾರಣೆ ನಡೆಸಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ. ನಿಯಮ ಉಲ್ಲಂಘನೆ ಮಾಡಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ಶರತ್ತು ಸೇರಿಸಿ, ಎಲ್ಲಾ ಗುತ್ತಿಗೆಗಳನ್ನು ಒಬ್ಬರಿಗೇ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಅರ್ಜಿದಾರರು ಹಲವರಿದ್ದರೂ ಒಬ್ಬನೇ ಗುತ್ತಿಗೆದಾರನಿಗೆ ಅವಕಾಶ ನೀಡಲಾಗಿದೆ. ಖರೀದಿಗಿಂತ ಹೆಚ್ಚಾಗಿ ದುಂದು ವೆಚ್ಚ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ದೀಪಾಲಂಕಾರದಲ್ಲೇ 15 ಲಕ್ಷಕ್ಕೂ ಅಧಿಕ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಸರಿಯಾದ ದಾಖಲೆ ಸಲ್ಲಿಸದಿದ್ದರೆ ವರದಿ ಮಾಡಲಾಗುತ್ತದೆ ಎಂದು ಲೋಕಾಯುಕ್ತ ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಪ್ರಕರಣವು ರಾಜ್ಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ.



