ಚಿಕ್ಕೋಡಿ:- ಪಟ್ಟಣದ ಚಿಕ್ಕೋಡಿಯಲ್ಲಿರುವ ರಿಲಯನ್ಸ್ ಸ್ಮಾರ್ಟ್ ಬಜಾರ್ನಲ್ಲಿ ಗ್ರಾಹಕರ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಗಂಭೀರ ನಿರ್ಲಕ್ಷ್ಯ ಪ್ರಕರಣ ಬೆಳಕಿಗೆ ಬಂದಿದೆ.
ಸ್ಮಾರ್ಟ್ ಬಜಾರ್ನಲ್ಲಿ ಫಂಗಸ್ ಹಿಡಿದ ಡೇಟ್ಸ್ ಸೇರಿದಂತೆ ಕೊಳೆತ ಆಹಾರ ಪದಾರ್ಥಗಳನ್ನು ಮಾರಾಟಕ್ಕೆ ಇಟ್ಟಿರುವುದು ಪತ್ತೆಯಾಗಿದ್ದು, ಗ್ರಾಹಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. KIMIA ಕಂಪನಿಯ ಡೇಟ್ಸ್ಗಳನ್ನು ಗ್ರಾಹಕರು ಖರೀದಿಸಿ ಸೇವಿಸಲು ಮುಂದಾದ ವೇಳೆ ಅವುಗಳಲ್ಲಿ ಫಂಗಸ್ ಕಂಡುಬಂದಿದೆ. ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಸ್ಮಾರ್ಟ್ ಬಜಾರ್ ಮ್ಯಾನೇಜರ್ರನ್ನು ಗ್ರಾಹಕರು ತರಾಟೆಗೆ ತೆಗೆದುಕೊಂಡು, ಯಾವುದೇ ಪರಿಶೀಲನೆ ಇಲ್ಲದೆ ಕೆಟ್ಟ ಗುಣಮಟ್ಟದ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಣ್ಣು–ತರಕಾರಿ ಸೇರಿದಂತೆ ಹಲವು ಆಹಾರ ವಸ್ತುಗಳು ಕೊಳೆತ ಸ್ಥಿತಿಯಲ್ಲಿರುವುದೂ ಕಂಡುಬಂದಿದೆ ಎನ್ನಲಾಗಿದೆ. ಈ ಗಂಭೀರ ಬೆಳವಣಿಗೆಗಳ ನಡುವೆಯೂ ಚಿಕ್ಕೋಡಿ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದ್ದು, FSSAI ಇಲಾಖೆ ಹಾಗೂ ಸ್ಮಾರ್ಟ್ ಬಜಾರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಹಕರು ಒತ್ತಾಯಿಸಿದ್ದಾರೆ.



