ಕೊಪ್ಪಳ: ಜಿಲ್ಲೆಯಲ್ಲಿ ವಿದೇಶಿಗರ ಅಕ್ರಮ ಪಾರ್ಟಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಗಂಗಾವತಿ ಸಮೀಪದ ತುಂಗಭದ್ರಾ ನದಿ ತೀರದಲ್ಲಿ ಫೆಬ್ರವರಿ 16ರಂದು ನಡೆದ ಪಾರ್ಟಿಯ ವೀಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲಿಸಲಾಗಿದೆ.
ಮುನಿರಾಬಾದ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿಜೆ ವ್ಯವಸ್ಥೆ ಮಾಡಿ, ತೆರೆದ ಜಾಗದಲ್ಲಿ ಪಾರ್ಟಿ ನಡೆಸಲಾಗಿದೆ. ‘ದಿ ಹಂಪಿ ಕೆಫೆ’ ರೆಸಾರ್ಟ್ ಮಾಲೀಕ ಪಿಯೂಷ್ ಹಾಗೂ ವ್ಯವಸ್ಥಾಪಕರ ವಿರುದ್ಧ ಕೆಪಿ ಕಾಯ್ದೆಯಡಿ ಕೇಸ್ ದಾಖಲಾಗಿದೆ.
ಎಸ್‌ಪಿ ರಾಮ್ ಅರಸಿದ್ದಿ ನೇತೃತ್ವದಲ್ಲಿ ತನಿಖೆ ವೇಗ ಪಡೆದುಕೊಂಡಿದ್ದು, ವಿಶೇಷ ತಂಡ ರಚಿಸಿ ಭಾಗವಹಿಸಿದ್ದವರ ವಿವರ ಸಂಗ್ರಹಿಸಲಾಗುತ್ತಿದೆ. ಜಿಲ್ಲಾಡಳಿತವೂ ಟಾಸ್ಕ್ ಫೋರ್ಸ್ ರಚಿಸಿ ಪರಿಶೀಲನೆ ಆರಂಭಿಸಿದೆ.
ದೂರುಗಳ ನಡುವೆಯೂ ಅನಧಿಕೃತ ಪಾರ್ಟಿಗಳು ಮರುಕಳಿಸುತ್ತಿರುವುದು ಕಾನೂನು ಸುವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ.



