ಮೈಸೂರು:- ನರ್ಸಿಂಗ್ ಕಾಲೇಜ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಇಡೀ ಕಟ್ಟಡ ಹೊತ್ತಿ ಉರಿದಿರುವ ಘಟನೆ ನಗರದ ದೇವೇಗೌಡ ಸರ್ಕಲ್ನಲ್ಲಿ ಜರುಗಿದೆ.
ಕಾಲೇಜು ಕಟ್ಟಡದ ಮೇಲ್ಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ, ಇಡೀ ಕಟ್ಟಡ ಧಗಧಗನೆ ಹೊತ್ತಿ ಉರಿದಿದೆ. ಶಾರ್ಟ್ ಸಕ್ರ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.



