ಮಂಡ್ಯ:- ಮಂಡ್ಯದ ಬೊಂತೆಕೊಪ್ಪಲು ಸಮೀಪ ಶನಿವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಕಾರು ಪಲ್ಟಿಯಾಗಿ ಅಪಘಾತ ಸಂಭವಿಸಿದೆ.
ಸುರೇಶ್ ಗೌಡ ಅವರು, ಕಾರ್ಯಕರ್ತರ ಮದುವೆಗೆಂದು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಭಾಗಶಃ ಜಖಂಗೊಂಡಿದೆ. ಅಪಘಾತದಲ್ಲಿ ಸುರೇಶ್ ಗೌಡರ ಕೈಗೆ ಪೆಟ್ಟು ಬಿದ್ದಿದ್ದು, ಚಾಲಕನಿಗೂ ಗಾಯಗಳಾಗಿವೆ.
ಕಾರು ಪಲ್ಟಿಯಾದ ತಕ್ಷಣ ಸುರೇಶ್ ಗೌಡ ಅವರ ಗನ್ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಸುರೇಶ್ ಗೌಡರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.



