ಕೊಪ್ಪಳ: ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಭೇಟಿ ನೀಡಿ, ಹನುಮಂತನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಹನುಮ ಜನ್ಮಸ್ಥಳವೆಂದು ಪುರಾಣ ಪ್ರಸಿದ್ಧಿಯಿರುವ ಅಂಜನಾದ್ರಿಯಲ್ಲಿ ತೆಲುಗು ಸಿನಿಮಾ ಜೈ ಹನುಮಾನ್ ಸಿನಿಮಾಗೆ ಭಕ್ತಿಭಾವದಿಂದ ಮುಹೂರ್ತ ನೆರವೇರಿತು. ಬೆಳಗ್ಗೆ 11:50ರ ಶುಭ ಮುಹೂರ್ತದಲ್ಲಿ ಚಿತ್ರಾರಂಭಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಪೂಜಾ ಕಾರ್ಯಕ್ರಮದಲ್ಲಿ ಸ್ಥಳೀಯ ಅರ್ಚಕರು, ಚಿತ್ರತಂಡದ ಸದಸ್ಯರು ಹಾಗೂ ಭಕ್ತರು ಉಪಸ್ಥಿತರಿದ್ದರು.
ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಆಂಜನೇಯನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಈ ಪಾತ್ರಕ್ಕಾಗಿ ಅವರು ವಿಶೇಷ ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ‘ಜೈ ಹನುಮಾನ್’ ಚಿತ್ರವನ್ನು ಖ್ಯಾತ ತೆಲುಗು ನಿರ್ದೇಶಕ ಪ್ರಶಾಂತ್ ವರ್ಮ ನಿರ್ದೇಶಿಸುತ್ತಿದ್ದಾರೆ. ಪೌರಾಣಿಕ ಹಿನ್ನೆಲೆ ಹಾಗೂ ಆಧುನಿಕ ಕಥನಶೈಲಿಯ ಸಂಯೋಜನೆಯೊಂದಿಗೆ ಸಿನಿಮಾ ಮೂಡಿಬರಲಿದ್ದು, ಈಗಾಗಲೇ ಸಿನಿಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಹುಟ್ಟಿಸಿದೆ.



